About Us       Contact

ಡಿ.28, 2017: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇದರ ಮಾತ್ರ ಪೂರ್ಣ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಬಿಸಿರೊಡಿನ ತಾ.ಪಂ.ನ ಎಸ್.ಜಿ.ಅರ್.ಎಸ್.ವೈ.ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಮಾತ್ರ ಪೂರ್ಣ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿದೆ ದ.ಕ.ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆಯನ್ನು ಕಂಡಿದೆ ಮುಂದಿನ ದಿನಗಳಲ್ಲಿ ಯಶಸ್ವಿ ಮಾಡಲು ಇಲಾಖೆಯವರು ಹೆಚ್ಚಿನ ಮುತುವರ್ಜಿವಹಿಸಬೇಕು ಎಂದರು. ಈ ಸಭೆಯಲ್ಲಿ ಅಂಗನವಾಡಿ ಇಲಾಖೆ ಯವರು ನೀಡಿದ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಪರಿಣಾಮವಾಗಿ ಕಾರ್ಯ ಗತವಾಗಲು ಬೇಕಾದ ಅವಶ್ಯಕತೆ ಗಳನ್ನು ಒದಗಿಸುವುದು ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

 

 

ಇದೇ ಸಂದರ್ಭ ಅಂಗನವಾಡಿ ಕಾರ್ಯಕರ್ತರು ಮತ್ತು ಅಧಿಕಾರಿಗಳು ಮಾತ್ರ ಪೂರ್ಣ ಯೋಜನೆಯ ಅನುಷ್ಟಾನದಲ್ಲಿ ಪ್ರಗತಿ ಕುಂಠಿತವಾಗಲು ಕ್ಷೇತ್ರ ಮಟ್ಟದಲ್ಲಿ ಕಂಡು ಬರುವ ನ್ಯೂನತೆಗಳನ್ನು ಸಚಿವರ ಗಮನಕ್ಕೆ ತಂದರು.

ವೇದಿಕೆಯಲ್ಲಿ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಮಹಿಳಾ ಮಕ್ಕಳ ಅಭಿವೃದ್ಧಿ ಯೋಜನೆ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಜಿಲ್ಲಾ ನಿರೂಪಣಾಧಿಕಾರಿ ಉಸ್ಮಾನ್, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಮಲ್ಲಿಕಾ, ಸುಧಾಜೋಶಿ, ಗಾಯತ್ರಿ ಕಂಬಳಿ, ಡಾ| ದೀಪಾ ಪ್ರಭು, ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

 

 

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal