About Us       Contact

 
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)


ಮುಂಬಯಿ, ಮಾ.24: ಭಂಡಾರಿ ಸೇವಾ ಸಮಿತಿ ಮುಂಬಯಿ, ಶ್ರೀ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಆಡಳಿತ ಮತ್ತು ಸೇವಾ ಟ್ರಸ್ಟ್ ಬಾರ್ಕೂರು ಸಮಿತಿ ಹಾಗೂ ಭಂಡಾರಿ ಮಹಾಮಂಡಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನಸಂಪರ್ಕ ಅಭಿಯಾನ ಮತ್ತು ಸಮಾಲೋಚನಾ ಸಭೆಯು ಇಂದಿಲ್ಲಿ ಶನಿವಾರ ಸಂಜೆ ಸಯಾನ್ ಪಶ್ಚಿಮದಲ್ಲಿನ ಸದ್ಗುರು ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಭಂಡಾರಿ ಸೇವಾ ಸಮಿತಿ ಮುಂಬಯಿ ಅಧ್ಯಕ್ಷ ನ್ಯಾ| ಶೇಖರ್ ಆರ್.ಭಂಡಾರಿ ಅಧ್ಯಕ್ಷತೆಯಲ್ಲಿ ನೇರವೇರಿತು.

ಭಂಡಾರಿ ಸಮುದಾಯದ ಕುಲದೇವರು ನೆಲೆಯಾದ ಉಡುಪಿ ಬಾರ್ಕೂರು ಅಲ್ಲಿನ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಇದೇ ಮೇ ತಿಂಗಳ ಮೊದಲ ವಾರದಿಂದ ಜರುಗಲಿರುವ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಷೋಡಶ ಪವಿತ್ರಾತ್ಮಕ ಸಂಪೂರ್ಣ ನಾಗಮಂಡಲ ವೈಭವೋತ್ಸವ ನಿಮಿತ್ತ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಗೆ ಶ್ರೀ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಆಡಳಿತ ಮತ್ತು ಸೇವಾ ಟ್ರಸ್ಟ್ ಬಾರ್ಕೂರು ಅಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ದೀಪ ಪ್ರಜ್ವಲಿಸಿ ಸಭೆಗೆ ಚಾಲನೆ ನೀಡಿದರು.

ಸಭೆಯಲ್ಲಿ ವಿಶೇಷ ಅತಿಥಿsಗಳಾಗಿ ಭಂಡಾರಿ ಮಹಾಮಂಡಲದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಅಂತರಾಷ್ಟ್ರೀಯ ಕೇಶ ವಿನ್ಯಾಸಕ ಹಾಗೂ ಶಿವಾಸ್ ಹೇರ್ ಡಿಸೈನರ್ಸ್ ಪ್ರೈವೇಟ್ ಲಿಮಿಟೆಡ್‍ನ ಕಾರ್ಯಾಧ್ಯಕ್ಷ ಡಾ| ಶಿವರಾಮ ಕೆ.ಭಂಡಾರಿ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾದ ಕೆ.ವಿಶ್ವನಾಥ ಭಂಡಾರಿ, ಮಾಧವ ಕೂಳೂರು ಮತ್ತು ಯು.ಗಣೇಶ್ ಭಂಡಾರಿ ಹಳೆಯಂಗಡಿ, ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ಸಲಹಾ ಸಮಿತಿ ಕಾರ್ಯಾಧ್ಯಕ್ಷ ನ್ಯಾ| ಸುಂದರ ಜಿ.ಭಂಡಾರಿ, ಮಹಿಳಾ ವಿಭಾಗಧ್ಯಕ್ಷೆ ಶೋಭಾ ಸುರೇಶ್ ಭಂಡಾರಿ ವೇದಿಕೆಯಲ್ಲಿ ಆಸೀನರಾಗಿದ್ದರು.

 

 

 

 

 

 

ಸಭೆಯಲ್ಲಿ ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ ಉಪಾಧ್ಯಕ್ಷರುಗಳಾದ ನ್ಯಾ| ರಾಮಣ್ಣ ಎಂ.ಭಂಡಾರಿ ಮತ್ತು ಪ್ರಭಾಕರ್ ಪಿ.ಭಂಡಾರಿ ಥಾಣೆ, ಗೌ| ಕೋಶಾಧಿಕಾರಿ ಕರುಣಾಕರ ಜಿ.ಭಂಡಾರಿ, ಮಹಿಳಾ ವಿಭಾಗದ ಕಾರ್ಯದರ್ಶಿ ರೇಖಾ ಎ.ಭಂಡಾರಿ, ಮಾಜಿ ಕಾರ್ಯಾಧ್ಯಕ್ಷೆ ಲಲಿತಾ ವಿ. ಭಂಡಾರಿ, ಸೌರಭ್ ಎಸ್.ಭಂಡಾರಿ, ಮೇಘ ಸೌರಭ್ ಭಂಡಾರಿ, ನವೀನ್ ಜೆ.ಭಂಡಾರಿ ಬಸ್ರೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಶ್ರೀ ಕಚ್ಚೂರು ನಾಗೇಶ್ವರ ದೇವರನ್ನು ಪೂಜಿಸಿ ಸಭೆಗೆ ಚಾಲನೆ ನೀಡಲಾಯಿತು.ಕು| ರೀಯಾ ರಂಜಿತ್ ಭಂಡಾರಿ ಪ್ರಾರ್ಥನೆಯನ್ನಾಡಿದರು. ಕಡಂದಲೆ ಸುರೇಶ್ ಎಸ್.ಭಂಡಾರಿ ಸ್ವಾಗತಿಸಿದರು. ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಗೌರವ ಕಾರ್ಯದರ್ಶಿ ಸೋಮಶೇಖರ ಎಂ.ಭಂಡಾರಿ ಪ್ರಸ್ತಾವಿಕ ನುಡಿಗಳನ್ನಾಡಿ ಮೇ.04ರಿಂದ ಮೇ.09 ತನಕ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವÀ ಷೋಡಶ ಪವಿತ್ರಾತ್ಮಕ ಸಂಪೂರ್ಣ ನಾಗಮಂಡಲ ವೈಭವೋತ್ಸವದ ಸ್ಥೂಲವಾದ ಮಾಹಿತಿ ನೀಡಿದರು. ಜೊತೆ ಕಾರ್ಯದರ್ಶಿ ಪುರುಷೋತ್ತಮ ಜಿ.ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಗೌ| ಪ್ರ| ಕಾರ್ಯದರ್ಶಿ ವಿಜಯ ಆರ್.ಭಂಡಾರಿ ಧನ್ಯವದಿಸಿದರು.

 

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal