About Us       Contact

ಮುಂಬಯಿ, ಜೂ.07, 2018 : ಮುನಿಯಾಲುಉದಯಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ (ರಿ.) ಅಧ್ಯಕ್ಷ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಸಮಾಕಸೇವಕ ಮುನಿಯಾಲು ಉದಯ ಶೆಟ್ಟಿ ಅವರು ನಡೆದಾಡುವ ದೇವರೆಂದೇ ಖ್ಯಾತರಾದ ತುಮಕೂರು ಸಿದ್ಧಗಂಗಾ ಮಠದ ಹಿರಿಯ ಸ್ವಾಮೀಜಿ ನೂರಹನ್ನೊಂದರ ಹರೆಯದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ಇಂದಿಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಿದರು.

ಉಡುಪಿ ಜಿಲ್ಲೆಯಲ್ಲಿ ಸೇವಾ ಸಂಸ್ಥೆ ಸ್ಥಾಪಿಸಿ ವಿದ್ಯಾಥಿರ್üವೇತನ, ವಿದ್ಯಾಥಿರ್ü ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಶ್ರೀ ಮಠದ ಆಪ್ತೇಷ್ಠರೊಬ್ಬರು ಸ್ವಾಮೀಜಿಗಳಿಗೆ ವಿವರಿಸಿದ ಹಿನ್ನೆಲೆಯಲ್ಲಿ ಶ್ರೀ ಮಠದ ವತಿಯಿಂದ ಉದಯ ಶೆಟ್ಟಿ ಅವರಿಗೆ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು.
ಶ್ರೀಗಳವರ ಮಾರ್ಗದರ್ಶನಕೋರಿದ ಉದಯ ಅವರಿಗೆ ಶ್ರೀಗಳು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal