About Us       Contact


(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)


ಮುಂಬಯಿ ಅ.05: ಚೆಂಬೂರು ಛೆಡಾ ನಗರದ ಶ್ರೀ ಸುಬ್ರಹ್ಮಣ್ಯ ಮಠದ ನಾಗ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನಮ್ ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠದ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ಶಾಸ್ತ್ರೋಕ್ತವಾಗಿ ಇಂದಿಲ್ಲಿ ಸ್ವಸ್ತಿ! ಶ್ರೀವಿಕಾರಿನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿ ದಿನವಾದ ಇಂದು ಸೋಮವಾರ ಬೆಳಿಗ್ಗೆಯಿಂದ ನಾಗರ ಪಂಚಮಿ ಸಂಭ್ರಮೋಲ್ಲಾಸದಿಂದ ಆಚರಿಸಲ್ಪಟ್ಟಿತು.

ಮಠದ ಪ್ರಧಾನ ವ್ಯವಸ್ಥಾಪಕ ವಿಷ್ಣು ಕಾರಂತ್ ಅವರ ಸಾರಥ್ಯದಲ್ಲಿ ವಿಷ್ಣು ಕಾರಂತ್, ಶ್ರೀಪಾದ ಭಟ್ ಸೇರಿದಂತೆ ಹಿರಿಯ ಪುರೋಹಿತನೇಕರು ಮುಂಜಾನೆಯಿಂದ ಹೋಮ, ಅಭಿಷೇಕ, ಸಂತಾನ, ಆರೋಗ್ಯ, ಸಂಪತ್ತು ಪ್ರಾಪ್ತಿಗಾಗಿ ಸಾಮೂಹಿಕ ಆಶ್ಲೇಷಾ ಬಲಿ, ನವಕ ಪ್ರಧಾನ ಕಲಶ, ಸರ್ಪಕೋಪ, ಸರ್ಪಶಾಪ ಪರಿಹಾರರ್ಥ ಸರ್ಪತ್ರಯ ಮಂತ್ರ ಹೋಮ, ಮಹಾಭಿಷೇಕ, ಅಲಂಕಾರ, ಮಹಾಪೂಜೆ, ತೀರ್ಥ ಪ್ರಸಾದ ಮತ್ತು ಅನ್ನಸಂತರ್ಪಣೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಪ್ರಸಾದ ವಿತರಿಸಿ ನೆರೆದ ಸದ್ಭಕ್ತರನ್ನು ಹರಸಿದರು.

ಸನ್ನಿಧಿಯಲ್ಲಿ ಅತ್ಯಾಕರ್ಷಕ ನಾಗರಂಗೋಲಿ ರಚಿಸಲಾಗಿದ್ದು, ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಮಠಕ್ಕಾಗಮಿಸಿ ವಿವಿಧ ಪೂಜೆಗಳಲ್ಲಿ ಪಾಲ್ಗೊಂಡು ಶ್ರೀನಾಗಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು.

 

 

 

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal