ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರ್ರಿಕ ಮಹಾವಿದ್ಯಾಲಯದ ಒಂಬತ್ತನೇ ವರ್ಷದ ವಾರ್ಷಿಕ ಕ್ರೀಡಾಕೂಟವು ದಿನಾಂಕ 28 ಫೆಬ್ರವರಿ 2019ರಂದು ಜರಗಿತು. ಶ್ರೀ ಮಹೇಶ್ ಪ್ರಸಾದ್, ವೃತ್ತ ನಿರೀಕ್ಷಕರು ಕಾಪು ಇವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಕಾಲೇಜಿನ ಎನ್‍ಸಿಸಿ ಕೆಡೆಟ್ ರಶ್ಮಿ ಇವರನ್ನು ಅಭಿನಂದಿಸಿ ತಾವು ಕೂಡ ಎನ್‍ಸಿಸಿ ಕೆಡೆಟ್ ಆಗಿದ್ದಾಗಿ ಹೇಳಿದರು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದರು. ರಾಷ್ಟ್ರ ಮೊದಲು ಎಂಬ ಧ್ಯೇಯದೊಂದಿಗೆ ಕರ್ತವ್ಯ ನಿರ್ವಹಿಸಲು ಕರೆ ನೀಡಿದರು.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರಿಗೆ ನಡೆಸಿದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ಮುಖ್ಯ ಅತಿಥಿಗಳು ವಿತರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ವಹಿಸಿದರು. ಪ್ರಾಂಶುಪಾಲರಾದ ಪ್ರೊ.ಡಾ.ತಿರುಮಲೇಶ್ವರ ಭಟ್, ಶಿರ್ವ ಪೋಲಿಸ್ ಠಾಣೆಯ ಉಪನಿರೀಕ್ಷಕರಾದ ಶ್ರೀ ಅಬ್ದುಲ್ ಖಾದರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶ್ರೀನಿವಾಸ್ ಬಿ ಎಮ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ರಮಿತ್ ಡಿ ಶೆಟ್ಟಿ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಕುಮಾರಿ ವೈಷ್ಣವಿ ಸ್ವಾಗತಿಸಿ ಕುಮಾರಿ ನಿಹಾರಿಕ ವಂದಿಸಿದರು. ತನುಷಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾಕೂಟದ ಆರಂಭದಲ್ಲಿ ಆಕರ್ಷಕ ಪಥಸಂಚಲನವು ಜರುಗಿತು. ಸಿವಿಲ್ ವಿಭಾಗದ ವಿದ್ಯಾರ್ಥಿಗಳ ತಂಡವು ಪಥಸಂಚಲನದ ಉತ್ತಮ ತಂಡ ಪ್ರಶಸ್ತಿ ಗಳಿಸಿತು.

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal