About Us       Contact

(ಚಿತ್ರ /  ವರದಿ : ರೋನ್ಸ್ ಬಂಟ್ವಾಳ್)

ಬೆಂಗಳೂರು, ನ.01, 2017: ಕರ್ನಾಟಕ ರಾಜ್ಯದ ಜನತೆಯು ನಾಡಿನ 62ನೇ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಇಂದಿಲ್ಲಿ ಬುಧವಾರ ಸಂಭ್ರಮದಿಂದ ಆಚರಿಸಿದ್ದು, ಆ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರವು ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ 2017ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿತು.

 

 

ಹೊರನಾಡ ಶ್ರೇಷ್ಠ ಸಮಾಜ ಸೇವಕರಾಗಿ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ಪ್ರಸಿದ್ಧ ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೋ ಅವರಿಗೆ ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಹೆಚ್.ಸಿದ್ಧರಾಮಯ್ಯ ಅವರು 20 ಗ್ರಾಂ ಚಿನ್ನ, ಒಂದು ಲಕ್ಷ ರೂಪಾಯಿ ನಗದು ಸ್ಮರಣಿಕೆಯೊಂದಿಗೆ ಮೈಸೂರು ಪೇಟ ಧರಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ-2017ರ ಪ್ರದಾನಿಸಿ ಗೌರವಿಸಿದರು.

ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಚಿಕ್ಕಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಆರ್.ವಿ ದೇವರಾಜು ಅವರ ಅಧ್ಯಕ್ಷತೆಯಲ್ಲಿ ನೇರವೇರಿದ ಸಮಾರಂಭದಲ್ಲಿ ಮುಖ್ಯ ಅತಿಥಿsಗಳಾಗಿ ಮಾನ್ಯ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವರಿ ಸಚಿವ ಕೆ.ಜೆ ಜಾರ್ಜ್,  ಕರ್ನಾಟಕ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಶ್ರೀಮತಿ ಉಮಾಶ್ರೀ, ಬೆಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಸಂಪತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಜೀನ್ ಆರ್.ಕೊಲಾಸೋ, ಇಂಟರ್‍ನೇಶನಲ್ ಫೆಡರೇಶನ್ ಆಫ್ ಕರ್ನಾಟಕ ಕ್ರಿಶ್ಚನ್ ಅಸೋಸಿಯೇಶನ್‍ನ (ಇಫ್‍ಕಾ) ರಾಜ್ಯ ಸಂಚಾಲಕ ಡೆನಿಸ್ ಡಿಸಿಲ್ವಾ ಇನ್ನಿತರ ಗಣ್ಯರು ಹಾಜರಿದ್ದು ಪ್ರಶಸ್ತಿ ಸ್ವೀಕೃತ ಕೊಲಾಸೋ ಅವರಿಗೆ ಅಭಿನಂದಿಸಿದರು.

 

Comments powered by CComment

Latest News

Copyright © 2016 - www.bantwaltimes.com. Powered by eCreators

Bantwal Times

Bantwal