Print

ಮಾ.02, 2018: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಮತ್ತು ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ (ರಿ). ಇದರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಬಿಸಿರೋಡಿನ ತಾ.ಪಂ. ಎಸ್ ಜಿ ಆರ್ ಎಸ್ ವೈ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸ್ಥಾಯಿ ಸಮಿತಿ ಅಧ್ಯಕ್ಷೆ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಅದ್ಯಕ್ಷತೆ ವಹಿಸಿ ಮಾತನಾಡಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಸರಕಾರ ಮಹಿಳೆಯರಿಗೆ ಬೇರೆ ಅವಕಾಶಗಳನ್ನು ನೀಡುತ್ತಿದೆ, ಮಹಿಳೆಯರು ಒಗ್ಗಟ್ಟಿನಲ್ಲಿ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ, ಮನೆಯ ಜವಬ್ದಾರಿಗಳನ್ನು ನಿಬಾಯಿಸಿ ಇಂತಹ ಸಂಘಟನೆಗಳಲ್ಲಿ ಪಾಲ್ಗೊಳ್ಳಿ, ಶಿಕ್ಷಣಕ್ಕೆ ಹೆಚ್ಚು ಗಮನ ಕೊಡಿ ಎಂದರು. ಮಹಿಳೆಗೆ ವಿವಿಧ ಯೋಜನೆಗಳ ಮೂಲಕ ಸಂಪಾದನೆಯನ್ನು ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದೆ ಎಂದರು.

ವೇದಿಕೆಯಲ್ಲಿ ತಾ.ಪಂ.ಸದಸ್ಯ ಸಂಜೀವ ಪೂಜಾರಿ, ದೈವಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಪುಷ್ಪ ಲತಾ, ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ಇಒ ರಾಜಣ್ಣ, ಒಕ್ಕೂಟದ ಉಪಾದ್ಯಕ್ಷೆ ರಂಜನಿ, ಕೋಶಾಧಿಕಾರಿ ಶಕುಂತಲಾ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಪೌಷ್ಟಿಕ ಅಹಾರ ತಯಾರಿ ಸ್ಪರ್ದೆಯಲ್ಲಿ ಶ್ರೀ ಶಕ್ತಿ ಗುಂಪುಗಳು ಭಾಗವಹಿಸಿದ್ದವು.

ರಾಜ್ಯ ಮಟ್ಟದಲ್ಲಿ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ಪುರಸ್ಕೃತೆ ಕೊಳಲಬಾಕಿಮಾರು ಅಂಗನವಾಡಿ ಕಾರ್ಯಕರ್ತೆ ವನಿತಾ ಅವರನ್ನು ಸನ್ಮಾನಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ ಸ್ವಾಗತಿಸಿ ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಉಷಾಕುಮಾರಿ ಎಮ್ ನಿರೂಪಿಸಿದರು.